Ezekiel 16:55 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನೂ ನಿನ್ನ ಸಹೋದರಿಯರೂ ತಿರುಗಿ ಕಟ್ಟಲ್ಪಡುವಿರಿ. ಸೊದೋಮಳೂ ಆಕೆಯ ಸುತ್ತಲಿರುವ ಪಟ್ಟಣಗಳೂ, ಸಮಾರ್ಯಳು ಮತ್ತು ಆಕೆಯ ಸುತ್ತಲಿರುವ ಪಟ್ಟಣಗಳೆಲ್ಲಾ ತಿರುಗಿ ಕಟ್ಟಲ್ಪಡುವವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.
Kannada BSI Bible 2016
ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.
Kannada Bible (KNCL) BSI 2016
ಆಗ ಸಮಾರಿಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರನ್ನೂ ಅವರ ಕುವರಿಯರನ್ನೂ ನಿನ್ನನ್ನೂ ನಿಮ್ಮ ಪೂರ್ವಸ್ಥಿತಿಗೆ ತರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.