Ezekiel 16:59 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಘಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಘಡಿಕೆಗೆ ನೀನು ಮಹತಬ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದಿ, ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.