Ezekiel 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದುಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.
Kannada BSI Bible 2016
ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು.
Kannada Bible (KNCL) BSI 2016
“ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.