Ezekiel 16:61 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಘಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
Kannada BSI Bible 2016
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.
Kannada Bible (KNCL) BSI 2016
ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.