Ezekiel 16:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನೊಐಡನೆ ಒಡಂಘಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’“ ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.