Ezekiel 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಘೂಕದೆಐಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.
Kannada BSI Bible 2016
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;
Kannada Bible (KNCL) BSI 2016
“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.