Ezekiel 17:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಘೂಕದೆಐಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.
Kannada BSI Bible 2016
ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.
Kannada Bible (KNCL) BSI 2016
“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.