Ezekiel 17:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಘಡಿಕೆಯನ್ನು ಮುರಿದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”
Kannada BSI Bible 2016
ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.
Kannada Bible (KNCL) BSI 2016
ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.