Ezekiel 17:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.
Kannada Bible (KNCL) BSI 2016
“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.