Ezekiel 17:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”
Kannada BSI Bible 2016
ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ ಕತ್ತಿಯ ಬಾಯಿಗೆ ತುತ್ತಾಗುವವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.