Ezekiel 17:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಘಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಘಗೆಯ ಪಕ್ಷಿಗಳು ವಾಸಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.
Kannada BSI Bible 2016
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.
Kannada Bible (KNCL) BSI 2016
ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.