Ezekiel 17:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಗೆ ಹೀಗೆ ಹೇಳು, “ದೇವರಾದ ಯೆಹೋವನು ಹೀಗೆನ್ನುತ್ತಾನೆ: ““ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರ್) ಲೆಘನೋನಿಗೆ ಘಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
Kannada BSI Bible 2016
ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,