Ezekiel 17:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಙೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.
Kannada BSI Bible 2016
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ರೆಂಬೆಗಳನ್ನು ಹರಡಿಸಿ ಚಿಗುರುಗಳನ್ನು ಹೊರಡಿಸಿತು.
Kannada Bible (KNCL) BSI 2016
ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.