Ezekiel 17:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಙೇರುಗಳನ್ನು ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.
Kannada BSI Bible 2016
ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.
Kannada Bible (KNCL) BSI 2016
“ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.