Ezekiel 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬಂದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಙೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಘಲಹೀನವಾಗುವುದು. ಆಗ ಅದನ್ನು ಙೇರುಸಹಿತ ಕಿತ್ತುಹಾಕಲು ಮಹಾ ಘಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.
Kannada BSI Bible 2016
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅದು ಸಮೃದ್ಧವಾಗಿಯೇ ಇರುವದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವವಲ್ಲವೆ; ಅದು ಬೇರುಸಹಿತ ಕೀಳಲ್ಪಡುವದು; ಬಹು ಬಲದಿಂದಲ್ಲ, ಬಹು ಜನರಿಂದಲ್ಲ.
Kannada Bible (KNCL) BSI 2016
“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು. ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ, ಬಹುಜನರ ಅಗತ್ಯವಿಲ್ಲ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.