Ezekiel 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಘಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಘಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬಂದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಙ್ದಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
Kannada BSI Bible 2016
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.
Kannada Bible (KNCL) BSI 2016
ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.