Ezekiel 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಘಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
Kannada BSI Bible 2016
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.
Kannada Bible (KNCL) BSI 2016
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.