Ezekiel 18:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಘಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.
Kannada BSI Bible 2016
ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು - ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವದಿಲ್ಲ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡಿಸಿ ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಬಾಳೇ ಬಾಳುವನು.
Kannada Bible (KNCL) BSI 2016
“ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.