Ezekiel 18:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಂದುವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನೂ ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬಂದುಕುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
Kannada BSI Bible 2016
ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು ನನ್ನ ಸಕಲ ವಿಧಿಗಳನ್ನು ಕೈಕೊಂಡು ನೀತಿನ್ಯಾಯಗಳನ್ನು ನಡಿಸಿದರೆ ಸಾಯನು, ಬಾಳೇ ಬಾಳುವನು.
Kannada Bible (KNCL) BSI 2016
“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.