Ezekiel 18:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನ್ನು ಘದಲಾಯಿಸಿ ಜೀವವನ್ನು ಹೊಂದಙೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
Kannada BSI Bible 2016
ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?