Ezekiel 18:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಘಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಘಹುದು. ಅವನು ಹೀಗೆ ಮಾಡುತ್ತಾ ಬಂದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
Kannada BSI Bible 2016
ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.
Kannada Bible (KNCL) BSI 2016
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.