Ezekiel 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನ್ನ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
Kannada BSI Bible 2016
ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮ ಸಮವಲ್ಲವಷ್ಟೆ.
Kannada Bible (KNCL) BSI 2016
ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ?