Ezekiel 18:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
Kannada BSI Bible 2016
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.