Ezekiel 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಒಳ್ಳೆಯ ಮನುಷ್ಯನು ಜನರ ಘಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
Kannada BSI Bible 2016
ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ
Kannada Bible (KNCL) BSI 2016
ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,