Ezekiel 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬಂದುಕುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವದರಿಂದ ಬಾಳೇ ಬಾಳುವನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.