Ezekiel 19:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಘಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಊಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದುಕಾಣುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.
Kannada BSI Bible 2016
ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ರಾಜದಂಡಯೋಗ್ಯವಾದ ಗಟ್ಟಿ ಕೊಂಬೆಗಳಿದ್ದವು, ಅವುಗಳ ಎತ್ತರವು ವಿುಕ್ಕ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹು ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.
Kannada Bible (KNCL) BSI 2016
ಅದರಲ್ಲಿದ್ದವು ರಾಜದಂಡ ಯೋಗ್ಯವಾದ ಗಟ್ಟಿ ಕೊಂಬೆಗಳು ಮಿಕ್ಕ ರೆಂಬೆಗಳಿಗಿಂತ ಅಧಿಕವಾಗಿತ್ತವುಗಳ ಎತ್ತರವು ಹಲವಾರು ರೆಂಬೆಗಳ ಮಧ್ಯೆ ಉದ್ದುದ್ದವಾಗಿ ಕಾಣಿಸಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.