Ezekiel 19:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದ್ರಾಕ್ಷಾಲತೆಯು ಙೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಘಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.
Kannada BSI Bible 2016
ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.
Kannada Bible (KNCL) BSI 2016
ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.