Ezekiel 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಙೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಙೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
Kannada BSI Bible 2016
ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೂ ಪ್ರಾಯದ ಸಿಂಹವಾಗಿ ಸಿಂಹಗಳ ನಡುವೆ ತಿರುಗುತ್ತಾ ಬೇಟೆ ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು.
Kannada Bible (KNCL) BSI 2016
ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.