Ezekiel 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.
Kannada BSI Bible 2016
ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಪಟ್ಟಣಗಳನ್ನು ಹಾಳುಮಾಡಿ [ಬಹುಮಂದಿ] ವಿಧವೆಯರಾದವರನ್ನು ಕಂಡಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವೂ ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.
Kannada Bible (KNCL) BSI 2016
ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.