Ezekiel 19:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುತ್ತಮುತ್ತಲಿನ ಜನಾಂಗಗಳವರು ಕೂಡಿಬಂದು ಅದರ ವಿರುದ್ಧವಾಗಿ ನಿಂತು, ಬಲೆಹರಡಿ ಅದನ್ನು ಬಂಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.
Kannada BSI Bible 2016
ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿಬಂದು ಅದಕ್ಕೆ ವಿರುದ್ಧವಾಗಿ ನಿಂತು ಬಲೆಯೊಡ್ಡಿ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು.
Kannada Bible (KNCL) BSI 2016
ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.