Ezekiel 19:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಅದನ್ನು ಮರದ ಪಂಜರದಲ್ಲಿಟ್ಟು ಕೊಂಡಿಗಳನ್ನು ಹಾಕಿ, ಬಾಬಿಲೋನಿನ ರಾಜನ ಬಳಿಗೆ ಕೊಂಡೊಯ್ದರು. ಅದರ ಗರ್ಜನೆಯು ಇಸ್ರೇಲಿನ ಪರ್ವತಗಳ ಮೇಲೆ ಇನ್ನೆದಿಗೂ ಕೇಳದಿರಲಿ ಎಂದು ಅದನ್ನು ಅಲ್ಲಿ ಸೆರೆಮನೆಗೆ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.
Kannada BSI Bible 2016
ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಅದನ್ನು ಸರಪಣಿಗಳಿಂದ ಬಿಗಿದು ಪಂಜರದಲ್ಲಿ ಹಾಕಿ ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿಬಿಟ್ಟವು.
Kannada Bible (KNCL) BSI 2016
ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.