Ezekiel 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಆ ಸುರುಳಿಯನ್ನು ನನೆಐದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.
Kannada BSI Bible 2016
ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಆ ಸುರಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಗೋಳು, ಮೂಲುಗು, ಮೊರೆ ಇವುಗಳೇ.
Kannada Bible (KNCL) BSI 2016
ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.