Ezekiel 2:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನೊಐಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
Kannada BSI Bible 2016
ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮವು ನನ್ನೊಳಗೆ ಸೇರಿ ನಾನು ಎದ್ದುನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆನು.
Kannada Bible (KNCL) BSI 2016
ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.