Ezekiel 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಘಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.
Kannada BSI Bible 2016
ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.
Kannada Bible (KNCL) BSI 2016
ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.