Ezekiel 2:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ನಿನ್ನ ಮಾತನ್ನು ಕೇಳಘಹುದು ಅಥವಾ ಕೇಳದಿರಘಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಙೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”
Kannada BSI Bible 2016
ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದ್ರೋಹಿವಂಶದವರು, ಒಂದು ವೇಳೆ ಕೇಳದೆ ಹೋದಾರು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಕಾಣಿಸಿಕೊಂಡಿದ್ದಾನೆಂದು ತಿಳಿದೇ ಇರುವರು.
Kannada Bible (KNCL) BSI 2016
ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.