Ezekiel 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಆ ಜನರು ನಿನ್ನನ್ನು ವಿರೋಊಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
Kannada BSI Bible 2016
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.
Kannada Bible (KNCL) BSI 2016
“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.