Ezekiel 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಙೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.
Kannada BSI Bible 2016
ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು.
Kannada Bible (KNCL) BSI 2016
“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.