Ezekiel 20:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಘಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.
Kannada BSI Bible 2016
ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.
Kannada Bible (KNCL) BSI 2016
ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.