Ezekiel 20:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಘಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.
Kannada BSI Bible 2016
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ತಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವಂತೆ ನನಗೂ ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ನೇವಿುಸಿದೆನು.
Kannada Bible (KNCL) BSI 2016
ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.