Ezekiel 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
Kannada BSI Bible 2016
ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.
Kannada Bible (KNCL) BSI 2016
ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.