Ezekiel 20:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಘಹು ಸುಂದರವಾದ ದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.
Kannada BSI Bible 2016
ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;
Kannada Bible (KNCL) BSI 2016
ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.