Ezekiel 20:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
Kannada BSI Bible 2016
ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
Kannada Bible (KNCL) BSI 2016
ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.