Ezekiel 20:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಙೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.
Kannada BSI Bible 2016
ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;
Kannada Bible (KNCL) BSI 2016
ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.