Ezekiel 20:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಙೇಕೆಂದು ತೀರ್ಮಾನಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ” ಅಂದುಕೊಂಡೆನು.
Kannada BSI Bible 2016
ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.
Kannada Bible (KNCL) BSI 2016
“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.