Ezekiel 20:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
Kannada BSI Bible 2016
ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
Kannada Bible (KNCL) BSI 2016
ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.