Ezekiel 20:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.
Kannada BSI Bible 2016
ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು, ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.
Kannada Bible (KNCL) BSI 2016
“ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.