Ezekiel 20:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಘಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
Kannada BSI Bible 2016
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.
Kannada Bible (KNCL) BSI 2016
ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.