Ezekiel 20:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನೀವು ನನ್ನ ಬುದ್ಧಿವಾದವನ್ನು ಕೇಳಲು ಘಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’