Ezekiel 20:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?
Kannada BSI Bible 2016
ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?
Kannada Bible (KNCL) BSI 2016
“ಇಸ್ರಯೇಲ್ ವಂಶದವರಿಗೆ ಹೀಗೆ ಹೇಳು: - ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಅಪವಿತ್ರಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ?