Ezekiel 20:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸಾಬಗತಿಸಙೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.